Karnataka Weather Alert: ಕರ್ನಾಟಕದಲ್ಲಿ ಮುಂದಿನ 7 ದಿನ ಭಾರೀ ಮಳೆ, ಗಾಳಿ; ಬೆಂಗಳೂರು, ಕೋಲಾರ, ಮೈಸೂರು, ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ
ಕರ್ನಾಟಕದಲ್ಲಿ ಈಶಾನ್ಯ ಮುಂಗಾರು ಮಳೆಯ ಪ್ರಭಾವ ಮುಂದುವರಿದಿದೆ. ಅಕ್ಟೋಬರ್ 18ರಿಂದ 24ರವರೆಗೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವಿವಿಧ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Anna Seve App: ರೇಷನ್ ಕಾರ್ಡ್ E-KYCಗೆ 3 ಆಪ್ಗಳು ಬೇಕು, ಸಂಪೂರ್ಣ ಮಾಹಿತಿ ಇಲ್ಲಿದೆ
ಕೆಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆ ಮತ್ತು ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ನಿರೀಕ್ಷೆಯಿದೆ. ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದ ವರದಿಯಂತೆ ದಕ್ಷಿಣ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಮತ್ತು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅಕ್ಟೋಬರ್ 18: ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ
ಭಾನುವಾರ ಕೊಡಗು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇದೆ.
ಇದನ್ನೂ ಓದಿ: SSLC Kannada Blueprint 2026-27: 10ನೇ ತರಗತಿ ಕನ್ನಡ ಪರೀಕ್ಷೆ – ಯಾವ ಪಾಠಗಳನ್ನು ಓದಿದರೆ ಹೆಚ್ಚು ಅಂಕ ಗಳಿಸಬಹುದು?
ಕರಾವಳಿಯಲ್ಲಿ ದಕ್ಷಿಣ ಕನ್ನಡದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗಬಹುದು. ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಲ್ಲೂ ಭಾರಿ ಮಳೆಯ ನಿರೀಕ್ಷೆಯಿದೆ. ಬಳ್ಳಾರಿ (Bellary), ದಾವಣಗೆರೆ, ಚಿತ್ರದುರ್ಗ (Chitradurga), ಶಿವಮೊಗ್ಗ ಮತ್ತು ವಿಜಯನಗರ (Vijayanagara) ಜಿಲ್ಲೆಗಳಲ್ಲಿ ಸಾಧಾರಣದಿಂದ (Moderate rain) ಮಧ್ಯಮ ಮಳೆ ಬೀಳಬಹುದು. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನ ಇರುವ ಸಾಧ್ಯತೆಯಿದೆ.
ಅಕ್ಟೋಬರ್ 19 ಮತ್ತು 20: ಕರಾವಳಿಯಲ್ಲಿ ಮಳೆ ಮುಂದುವರಿಕೆ
ಸೋಮವಾರ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಕಡೆ ಗುಡುಗು ಸಹಿತ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಬಹುದು. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಕೆಲವು ಕಡೆ ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ. ತಲುಪಬಹುದು.
ಮಂಗಳವಾರವೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯ ಸಾಧ್ಯತೆಯಿದೆ.
ಇದನ್ನೂ ಓದಿ: Sukanya Samriddhi Scheme: ₹49 ಲಕ್ಷಕ್ಕೂ ಹೆಚ್ಚು ಬಡ್ಡಿ ಗಳಿಸುವುದು ಹೇಗೆ?
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ನಿರೀಕ್ಷೆಯಿದೆ.
ಅಕ್ಟೋಬರ್ 21ರಿಂದ 24: ಮಳೆಯ ಪ್ರಮಾಣ ಕ್ರಮೇಣ ಇಳಿಕೆ
ಬುಧವಾರ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗಬಹುದು. ಚಾಮರಾಜನಗರ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ (including Bangalore) ದಕ್ಷಿಣ ಒಳನಾಡಿನ (in many districts) ಹಲವು ಜಿಲ್ಲೆಗಳಲ್ಲಿ ಹಗುರದಿಂದ (moderate rainfall) ಸಾಧಾರಣ ಮಳೆಯ ನಿರೀಕ್ಷೆಯಿದೆ.
ಗುರುವಾರವೂ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯಬಹುದು. ಚಾಮರಾಜನಗರ ಜಿಲ್ಲೆಯಲ್ಲಿ ಕೆಲವು ಸ್ಥಳಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು, ಕೊಡಗು, ಹಾಸನ, ಮೈಸೂರು, ಬೆಂಗಳೂರು, ಮಂಡ್ಯ, ಕೋಲಾರ, ತುಮಕೂರು ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಬಹುದು. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಕಡೆ ತುಂತುರು ಮಳೆಯ ಸಾಧ್ಯತೆಯಿದೆ.
ಶುಕ್ರವಾರ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣದಿಂದ ಮಧ್ಯಮ ಮಳೆಯ ನಿರೀಕ್ಷೆಯಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗಬಹುದು.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ. ಶನಿವಾರವೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು, ಕೊಡಗು, ಶಿವಮೊಗ್ಗ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಬಹುದು.
ಇದನ್ನೂ ಓದಿ: PM Kisan 24th Installment Date: ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಬರುತ್ತೆ? ರೈತರು ಈ ಕೆಲಸ ಮಾಡುವುದು ಕಡ್ಡಾಯ
ಜನರು ಎಚ್ಚರಿಕೆ ವಹಿಸಬೇಕು
ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳ ಜನರು ಸ್ಥಳೀಯ ಹವಾಮಾನ ಎಚ್ಚರಿಕೆಗಳನ್ನು ನಿರಂತರವಾಗಿ ಗಮನಿಸಬೇಕು. ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಸಮೀಪ ಆಶ್ರಯ ಪಡೆಯುವುದನ್ನು ತಪ್ಪಿಸಬೇಕು.
ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ನೀರು ನುಗ್ಗುವ ಸಾಧ್ಯತೆ ಬಗ್ಗೆ ಎಚ್ಚರಿಕೆ ವಹಿಸಬೇಕು. ಹವಾಮಾನ ಇಲಾಖೆಯ ಮುಂದಿನ ಪ್ರಕಟಣೆಗಳ ಆಧಾರದಲ್ಲಿ ಮಳೆಯ ತೀವ್ರತೆ ಮತ್ತು ಎಚ್ಚರಿಕೆಗಳಲ್ಲಿ ಬದಲಾವಣೆಗಳಾಗಬಹುದು.
ಬೆಂಗಳೂರು ನಗರದಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ಮತ್ತು ಮಳೆಯ ಸಾಧ್ಯತೆ ಹೆಚ್ಚಾಗಿದೆ. ಕೆಲವು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಎಚ್ಚರಿಕೆ ವಹಿಸುವುದು ಉತ್ತಮ. ರೈತರು ಬೆಳೆಗಳ ರಕ್ಷಣೆಗೆ ಗಮನ ಹರಿಸಬೇಕು. ಮೀನುಗಾರರು ಸಮುದ್ರಕ್ಕೆ ಹೋಗುವ ಮೊದಲು ಹವಾಮಾನ ಎಚ್ಚರಿಕೆಯನ್ನು ಪರಿಶೀಲಿಸಬೇಕು.
ನವೀಕೃತ ಹವಾಮಾನ ಮಾಹಿತಿಗಾಗಿ ಭಾರತೀಯ ಹವಾಮಾನ ಇಲಾಖೆಯ ಮಾಸಂ ಆ್ಯಪ್ ಡೌನ್ಲೋಡ್ ಮಾಡಿ ಅಥವಾ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433ಗೆ ಕರೆ ಮಾಡಬಹುದು. ಎಲ್ಲಾ ಜನರು ಸುರಕ್ಷತೆಯನ್ನು ಮೊದಲು ಇಟ್ಟುಕೊಂಡು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು.