KEA Recruitment 2026: ಆರೋಗ್ಯ ಇಲಾಖೆಯಲ್ಲಿ 188 ಹುದ್ದೆಗಳ ನೇಮಕಾತಿ! ಫಾರ್ಮಸಿ ಮತ್ತು ನರ್ಸಿಂಗ್ ಆಫೀಸರ್ಗೆ ಅರ್ಜಿ ಆಹ್ವಾನ
ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಉತ್ತಮ ಅವಕಾಶ ದೊರೆತಿದೆ.
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಫಾರ್ಮಸಿ ಆಫೀಸರ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಸೂಚನೆ ಪ್ರಕಟಿಸಿದೆ.
ಒಟ್ಟು 188 ಹುದ್ದೆಗಳು ಭರ್ತಿಯಾಗಲಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಆಗಸ್ಟ್ 07, 2026ರಿಂದ ಪ್ರಾರಂಭವಾಗಿದ್ದು, ಕೊನೆಯ ದಿನಾಂಕ ಆಗಸ್ಟ್ 30, 2026. ಅರ್ಹರು ಸಮಯಕ್ಕೆ ಅರ್ಜಿ ಸಲ್ಲಿಸಿ ಈ ಸರ್ಕಾರಿ ನೌಕರಿಯ ಲಾಭ ಪಡೆಯಬಹುದು.
ಹುದ್ದೆಗಳ ವಿವರ:
- ಫಾರ್ಮಸಿ ಆಫೀಸರ್: 98 ಹುದ್ದೆಗಳು
- ನರ್ಸಿಂಗ್ ಆಫೀಸರ್: 90 ಹುದ್ದೆಗಳು
- ಒಟ್ಟು: 188 ಹುದ್ದೆಗಳು
ಈ ಹುದ್ದೆಗಳು ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿವೆ. ಆರೋಗ್ಯ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಈ ನೇಮಕಾತಿ ಮಹತ್ವದ್ದಾಗಿದೆ.
ಶೈಕ್ಷಣಿಕ ಅರ್ಹತೆ.?
ಫಾರ್ಮಸಿ ಆಫೀಸರ್: ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ Diploma in Pharmacy ಪೂರ್ಣಗೊಳಿಸಿರಬೇಕು. ಕರ್ನಾಟಕ ಫಾರ್ಮಸಿ ಕೌನ್ಸಿಲ್ನಲ್ಲಿ ನೋಂದಣಿ ಹೊಂದಿರುವುದು ಕಡ್ಡಾಯ.
ನರ್ಸಿಂಗ್ ಆಫೀಸರ್: ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ Diploma in General Nursing ಪೂರ್ಣಗೊಳಿಸಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್ನಲ್ಲಿ ನೋಂದಣಿ ಹೊಂದಿರಬೇಕು.
ವಯೋಮಿತಿ ಮತ್ತು ಇತರ ವಿವರಗಳು.?
ಸಾಮಾನ್ಯ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷ. OBC ಅಭ್ಯರ್ಥಿಗಳಿಗೆ 43 ವರ್ಷ, SC/ST ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿ ನಿಗದಿಯಾಗಿದೆ. ಮೀಸಲಾತಿ ನಿಯಮಗಳು ಸರ್ಕಾರಿ ನಿಯಮಾನುಸಾರ ಅನ್ವಯವಾಗುತ್ತವೆ.
ಆಯ್ಕೆ ಪ್ರಕ್ರಿಯೆ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿರುವ ನಿಯಮಗಳ ಪ್ರಕಾರ ನಡೆಯಲಿದೆ.
ಅರ್ಹತೆ, ಮೀಸಲಾತಿ, ಪರೀಕ್ಷಾ ವಿಧಾನ ಮತ್ತು ದಾಖಲೆ ಪರಿಶೀಲನೆ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದುವುದು ಕಡ್ಡಾಯ.
ಗೃಹಲಕ್ಷ್ಮಿ 32ನೇ ಕಂತು ಬ್ಯಾಂಕ್ ಖಾತೆಗೆ ಹಣ ಜಮೆ ಆರಂಭ: 33ನೇ ಕಂತು ಸಹ ಶೀಘ್ರದಲ್ಲೇ ಬಿಡುಗಡೆ ಡಿ ಕೆ ಶಿವಕುಮಾರ್
ಅರ್ಜಿ ಹೇಗೆ ಸಲ್ಲಿಸುವುದು (How To Apply).?
ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಲಿಂಕ್: https://cetonline.karnataka.gov.in/kea/nurrpc2026
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ.?
ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳಾದ ಶೈಕ್ಷಣಿಕ ಪ್ರಮಾಣಪತ್ರಗಳು, ಕೌನ್ಸಿಲ್ ನೋಂದಣಿ ಪ್ರಮಾಣಪತ್ರ, ಆಧಾರ್, ಜಾತಿ/ಆದಾಯ ಪ್ರಮಾಣಪತ್ರ (ಅನ್ವಯವಾದರೆ), ಪಾಸ್ಪೋರ್ಟ್ ಗಾತ್ರದ ಫೋಟೋ ಮತ್ತು ಸಹಿಯನ್ನು ಸಿದ್ಧಪಡಿಸಿಕೊಳ್ಳಿ. ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ನೇಮಕಾತಿ ಸಂಬಂಧಿತ ಎಲ್ಲಾ ನವೀಕರಣಗಳು, ಅಧಿಸೂಚನೆ PDF ಮತ್ತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ KEA ಪೋರ್ಟಲ್ನ್ನು ನಿಯಮಿತವಾಗಿ ಪರಿಶೀಲಿಸಿ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಸಮಯಕ್ಕೆ ಸರಿಯಾಗಿ ಅರ್ಜಿ ಸಲ್ಲಿಸುವುದು ಒಳಿತು. ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳಿ.
ತುರ್ತು ಹಣ ಬೇಕಾ? Canara Bank Personal Loan ನಿಮ್ಮಿಗೆ ಬೆಸ್ಟ್ ಆಯ್ಕೆ – ಕಡಿಮೆ ಬಡ್ಡಿಯಲ್ಲಿ ₹10 ಲಕ್ಷ ಸಾಲ