ಪ್ರೋತ್ಸಾಹ ಧನ ಯೋಜನೆ: ವಿದ್ಯಾರ್ಥಿಗಳಿಗೆ ₹50,000 ವರೆಗೆ ಸಹಾಯಧನ ಸಿಗುತ್ತೆ – ಇಂದೇ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ ಕರ್ನಾಟಕ ರಾಜ್ಯ ಸರ್ಕಾರ ವತಿಯಿಂದ ಪರಿಶಿಷ್ಟ ಬಂಗಾರದ ವಿದ್ಯಾರ್ಥಿಗಳಿಗೆ ಇದೀಗ ಸುವರ್ಣ ಅವಕಾಶ. ಹೌದು ಗೆಳೆಯರೇ ಕರ್ನಾಟಕ ರಾಜ್ಯ ಸರ್ಕಾರ ವತಿಯಿಂದ ಪ್ರಥಮ ದರ್ಜೆಯಲ್ಲಿ ಪಾಸಾದಂತ ವಿದ್ಯಾರ್ಥಿಗಳಿಗೆ 7500 ಯಿಂದ ₹50,000 ವರೆಗೆ ಆರ್ಥಿಕ ನೆರವು ನೀಡುತ್ತಿದೆ.
ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಒಂದು ಪ್ರೋತ್ಸಾಹ ಧನ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಯಾವಾಗ ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನೆಯ ಮೂಲಕ ತಿಳಿದುಕೊಳ್ಳೋಣ

ಏನಿದು ಪ್ರೋತ್ಸಾಹ ಧನ ಯೋಜನೆ..?
ಹೌದು ಗೆಳೆಯರೇ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಯಿಂದ ಸ್ನಾತಕೋತ್ತರ ಪದವಿ ವರೆಗೆ ಪ್ರಥಮ ದರ್ಜೆಯಲ್ಲಿ ಪಾಸಾದವರಿಗೆ ವಿದ್ಯಾರ್ಥಿಗಳಿಗೆ ಬರೋಬ್ಬರಿ ₹50,000 ವರೆಗೆ ಪ್ರೈಸ್ ಮನಿ ಸ್ಕಾಲರ್ಶಿಪ್ ಮೂಲಕ ನೀಡುತ್ತಿದೆ.
ಹೌದು ಗೆಳೆಯರೇ ವಿವಿಧ ಹಂತಗಳಲ್ಲಿ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾದರೆ ರಾಜ್ಯ ಸರ್ಕಾರ ಪ್ರೈಜ್ ಮನಿ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಕನಿಷ್ಠ 7500 ಯಿಂದ ಗರಿಷ್ಠ 50 ಸಾವಿರ ವರೆಗೆ ಪ್ರೈಸ್ ಮನಿ ಸ್ಕಾಲರ್ಶಿಪ್ ನೀಡುತ್ತಿದೆ ಹಾಗಾಗಿ ಆಸಕ್ತಿ ಇರುವಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ 31 ಜನವರಿ 2026 ಆಗಿದೆ
ರಾಜ್ಯ ಸರ್ಕಾರ ಈ ಒಂದು ಯೋಜನೆಯನ್ನು ಪ್ರಾರಂಭಿಸಲು ವಿದ್ಯಾರ್ಥಿಗಳು ಯಾವುದೇ ರೀತಿ ಹಣದ ಕೊರತೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸರಕಾರ ಈ ಒಂದು ಯೋಜನೆಯನ್ನು ಪ್ರಾರಂಭ ಮಾಡಿದೆ ಹಾಗಾಗಿ ಪ್ರತಿಭಾವಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.
ಯಾವ ವಿದ್ಯಾರ್ಥಿಗಳು ಈ ಒಂದು ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು..?
ಪ್ರೋತ್ಸಾಹ ಧನ ಯೋಜನೆಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಇದರ ಜೊತೆಗೆ ವೃತ್ತಿಪರ ಕೋರ್ಸ್ ಗಳಲ್ಲಿ ಪ್ರಥಮ ದರ್ಜೆಯಲ್ಲಿ ಅಂದರೆ ಶೇಕಡ 60 ಕ್ಕಿಂತ ಹೆಚ್ಚಿನ ಅಂಕ ಪಡೆದುಕೊಂಡು ಪಾಸಾದರೆ ಅಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಎಷ್ಟು ಹಣ ಸಿಗುತ್ತೆ ಮತ್ತು ಪ್ರಯೋಜನಗಳೇನು..?
ಈ ಪ್ರೋತ್ಸಾಹ ಧನ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ನೇರವಾಗಿ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗುತ್ತದೆ ಇದರಿಂದ ಯಾವುದೇ ರೀತಿ ಮಧ್ಯವರ್ತಿಯ ಅವಶ್ಯಕತೆ ಇರುವುದಿಲ್ಲ
ವಿದ್ಯಾರ್ಥಿಗಳು ತೆಗೆದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನಿರ್ಧರಿಸಲಾಗುತ್ತದೆ
ವಿದ್ಯಾರ್ಥಿಗಳು ಹತ್ತನೇ ತರಗತಿಯಲ್ಲಿ ಶೇಕಡ 60 ಕ್ಕಿಂತ ಮತ್ತು 75% ಕಡಿಮೆ ಅಂಕ ಗಳಿಸಿದರೆ ಅಂತ ವಿದ್ಯಾರ್ಥಿಗಳಿಗೆ ₹7,500 ವರಗೆ ಪ್ರೋತ್ಸಾಹ ಧನ ಸಿಗುತ್ತದೆ ಹಾಗೂ 75% ಗಿಂತ ಹೆಚ್ಚಿನ ಅಂಕ ಪಡೆದರೆ ₹15,000 ವರೆಗೆ ಪ್ರೋತ್ಸಾಹ ಧನ ಸಿಗುತ್ತದೆ
ದ್ವಿತೀಯ ಪಿಯುಸಿಯಲ್ಲಿ ಹಾಗೂ ಡಿಪ್ಲೋಮಾ ಕೋರ್ಸ್ನಲ್ಲಿ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾದರೆ ಅಂತ ವಿದ್ಯಾರ್ಥಿಗಳಿಗೆ 20 ಸಾವಿರ ವರೆಗೆ ಸಹಾಯಧನ ಸಿಗುತ್ತದೆ
ಪದವಿ (BA,B.Com, B.SC ಮತ್ತು ಇತರೆ ಪದವಿ) ಕೋರ್ಸ್ ಗಳಲ್ಲಿ ಉತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ಬರೋಬ್ಬರಿ 25000 ವರೆಗೆ ಪ್ರೋತ್ಸಾಹ ಧನ ಸಿಗುತ್ತದೆ
ಸ್ನಾತಕೋತ್ತರ ಪದವಿ ಕೋರ್ಸ್ ಗಳಾದ (MA, M.S, M.Com ಅಥವಾ ಇತರ ಸ್ನಾತಕೋತ್ತರ ಪದವಿ ಕೋರ್ಸ್ ಗಳಲ್ಲಿ) ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರೂ. 30,000 ವರೆಗೆ ಪ್ರೋತ್ಸಾಹ ಧನ ಪಡೆದುಕೊಳ್ಳಲು ಅವಕಾಶವಿದೆ
ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಹಾಗೂ ಕೃಷಿ ವಿಜ್ಞಾನ, ಪಶು ವೈದ್ಯಕೀಯ ಇಂಥ ಕೋರ್ಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 35,000 ವರೆಗೆ ಪ್ರೋತ್ಸಾಹ ಧನ ಪಡೆಯಬಹುದು
ಸ್ನಾತಕೋತ್ತರ ಪದವಿಯಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಒಂದರಿಂದ ಐದನೇ ರಾಂಕ್ ಪಡೆದ ವಿದ್ಯಾರ್ಥಿಗಳಿಗೆ ಬರೋಬ್ಬರಿ ಐವತ್ತು ಸಾವಿರ ರೂಪಾಯಿವರೆಗೆ ಪ್ರೋತ್ಸಾಹ ಧನ ಪಡೆಯಲು ಅವಕಾಶವಿರುತ್ತದೆ
ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.?
ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಎಲ್ಲಾ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿ ಬೇಕಾದರೆ ನೀವು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
swdservices.karnataka.gov.in/PrizeMoneyClientApp/
ಇದೇ ರೀತಿ ಪ್ರತಿದಿನ ಮಾಹಿತಿ ಬೇಕೆ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳುವುದರಿಂದ ಪ್ರತಿದಿನ ಹೊಸ ವಿಷಯಗಳು ನಿಮಗೆ ತಿಳಿಯಲು ಸಾಧ್ಯವಾಗುತ್ತದೆ
ಪ್ರತಿ ತಿಂಗಳು 3000 ಪಿಂಚಣಿ ಸಿಗುತ್ತೆ.! ಈ ಒಂದು ಕಾರ್ಡ್ ಗೆ ನೀವು ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ