Ration News: ರಾಜ್ಯದ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ! ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ತೆರೆದಿರಲಿ
ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಅನುಕೂಲವಾಗುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಜುಲೈ-2026ರ ಅನ್ನಭಾಗ್ಯ ಅಕ್ಕಿ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ವಿತರಣೆ ಮಾಡುವ ಅಕ್ಕಿಯನ್ನು ಫಲಾನುಭವಿಗಳಿಗೆ ಯಾವುದೇ ವಿಳಂಬವಿಲ್ಲದೆ ತಲುಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ನ್ಯಾಯಬೆಲೆ ಅಂಗಡಿಗಳ ಕಾರ್ಯಾವಧಿ ವಿಸ್ತರಣೆ.?
ಇನ್ನು ಮುಂದೆ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಡ್ಡಾಯವಾಗಿ ತೆರೆದಿರಬೇಕು.
ಈ ಅವಧಿಯಲ್ಲಿ ಫಲಾನುಭವಿಗಳಿಗೆ ಪಡಿತರ ವಿತರಣೆ ಮಾಡಬೇಕೆಂದು ಇಲಾಖೆಯ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕೆಲವೆಡೆ ನ್ಯಾಯಬೆಲೆ ಅಂಗಡಿ ಮಾಲೀಕರು ಸಗಟು ಮಳಿಗೆಗಳಿಂದ ಆಹಾರ ಧಾನ್ಯವನ್ನು ಸಂಪೂರ್ಣವಾಗಿ ಪಡೆದುಕೊಂಡಿದ್ದರೂ ಪಡಿತರ ವಿತರಣೆಯನ್ನು ತಕ್ಷಣ ಆರಂಭಿಸದೆ ವಿಳಂಬ ಮಾಡುತ್ತಿದ್ದ ಪ್ರಕರಣಗಳು ಇಲಾಖೆಯ ಗಮನಕ್ಕೆ ಬಂದಿವೆ.
ಕೆಲವು ಅಂಗಡಿಗಳು ಎಲ್ಲಾ ದಾಸ್ತಾನು ಬಂದ ನಂತರವೇ ವಿತರಣೆ ಆರಂಭಿಸುತ್ತಿದ್ದವು. ಇದನ್ನು ತಡೆಯಲು ಇಲಾಖೆ ಸ್ಪಷ್ಟ ನಿರ್ದೇಶನ ನೀಡಿದೆ.
ಲಭ್ಯವಿರುವ ಸ್ಟಾಕ್‌ನಲ್ಲೇ ವಿತರಣೆ ಆರಂಭಿಸಿ.?
ಯಾವ ಪ್ರಮಾಣದ ಆಹಾರಧಾನ್ಯ ಲಭ್ಯವಾಗುತ್ತದೆಯೋ ಅದನ್ನು ತಕ್ಷಣವೇ ಫಲಾನುಭವಿಗಳಿಗೆ ವಿತರಣೆ ಮಾಡಬೇಕು. ಎಲ್ಲಾ ದಾಸ್ತಾನು ಬರುವವರೆಗೆ ಕಾಯಬಾರದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಜುಲೈ ತಿಂಗಳ ಆಹಾರಧಾನ್ಯ ಹಾಗೂ ಅನ್ನಭಾಗ್ಯ ಅಕ್ಕಿಯ ವಿತರಣೆಯನ್ನು ಜುಲೈ 31ರೊಳಗೆ ಪೂರ್ಣಗೊಳಿಸಬೇಕು.
ಜಿಲ್ಲೆಗಳ ಜಂಟಿ ನಿರ್ದೇಶಕರು ಮತ್ತು ಉಪನಿರ್ದೇಶಕರು ತಮ್ಮ ವ್ಯಾಪ್ತಿಯ ಎಲ್ಲಾ ನ್ಯಾಯಬೆಲೆ ಅಂಗಡಿಗಳು ನಿಗದಿತ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಬೇಕು.
ಆಹಾರ ನಿರೀಕ್ಷಕರು ನಿಯಮಿತವಾಗಿ ಮೇಲ್ವಿಚಾರಣೆ ನಡೆಸಿ, ಅರ್ಹ ಪಡಿತರ ಚೀಟಿದಾರರಿಗೆ ಸಂಪೂರ್ಣ ಆಹಾರಧಾನ್ಯ ವಿತರಣೆ ಆಗುವುದನ್ನು ಖಚಿತಪಡಿಸಿಕೊಳ್ಳಬೇಕು.
ಉಲ್ಲಂಘನೆಗೆ ಕಠಿಣ ಕ್ರಮ.?
ಸರ್ಕಾರದ ಆದೇಶವನ್ನು ಉಲ್ಲಂಘಿಸಿ ನಿಗದಿತ ಸಮಯದಲ್ಲಿ ಅಂಗಡಿ ತೆರೆಯದಿದ್ದರೆ ಅಥವಾ ಪಡಿತರ ವಿತರಣೆಯಲ್ಲಿ ಅನಗತ್ಯ ವಿಳಂಬ ಮಾಡಿದರೆ, ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿ ವಿತರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಫಲಾನುಭವಿಗಳು ಯಾವುದೇ ಅಡಚಣೆ ಎದುರಿಸಿದರೆ ಸ್ಥಳೀಯ ಆಹಾರ ಇಲಾಖೆ ಕಚೇರಿ ಅಥವಾ ಹೆಲ್ಪ್‌ಲೈನ್‌ಗೆ ದೂರು ನೀಡಬಹುದು.
ಈ ಕ್ರಮದಿಂದ ಕೆಲಸದ ನಡುವೆ ಅಥವಾ ಸಂಜೆ ಸಮಯದಲ್ಲಿಯೂ ಪಡಿತರ ಪಡೆಯಲು ಅನುಕೂಲವಾಗಲಿದೆ. ವಿಶೇಷವಾಗಿ ಕೆಲಸಗಾರರು, ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ಇದು ದೊಡ್ಡ ನೆರವಾಗಲಿದೆ.
ಬಿಪಿಎಲ್ ಕಾರ್ಡ್ ಕಳೆದುಕೊಂಡವರಿಗೆ ಗುಡ್ ನ್ಯೂಸ್.?
ರಾಜ್ಯದಲ್ಲಿ ಇತ್ತೀಚೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಡೆದ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯ ನಡೆದಿದೆ.
ಕೆಲವು ಅರ್ಹರ ಬಳಿಯೂ ಕಾರ್ಡ್‌ಗಳು ರದ್ದಾಗಿ ಎಪಿಎಲ್‌ಗೆ ವರ್ಗಾವಣೆಯಾದ ಪ್ರಕರಣಗಳು ವರದಿಯಾಗಿದ್ದವು. ಸರ್ಕಾರ ಇಂತಹ ಅರ್ಹರು ಮತ್ತೆ ಅರ್ಜಿ ಸಲ್ಲಿಸಿ ಬಿಪಿಎಲ್ ಕಾರ್ಡ್ ಹಿಂಪಡೆಯಲು ಅವಕಾಶ ಕಲ್ಪಿಸಿದೆ.
ವಿಶೇಷವಾಗಿ ಅನಾರೋಗ್ಯಕ್ಕೆ ಒಳಗಾದವರಿಗೆ ಯಾವುದೇ ವಿಳಂಬವಿಲ್ಲದೆ 15 ದಿನಗಳ ಒಳಗಾಗಿ ಕಾರ್ಡ್ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.
ಅರ್ಹರು ತಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಸ್ಥಿತಿ ಪರಿಶೀಲಿಸಿಕೊಳ್ಳುವುದು ಉತ್ತಮ.
ಪಡಿತರ ಚೀಟಿ ಸಂಬಂಧಿತ ಸೇವೆಗಳಿಗಾಗಿ ಅಧಿಕೃತ ಆಹಾರ ಇಲಾಖೆಯ ಮೊಬೈಲ್ ಆ್ಯಪ್ ಅಥವಾ ಸೇವಾ ಸಿಂಧು ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಆ್ಯಪ್ ಸ್ಟೋರ್‌ಗಳಲ್ಲಿ ಲಭ್ಯವಿರುವ ಈ ಆ್ಯಪ್‌ಗಳ ಮೂಲಕ ಕಾರ್ಡ್ ಸ್ಥಿತಿ, ವಿತರಣೆ ವಿವರ ಮತ್ತು ಅರ್ಜಿ ಸ್ಥಿತಿಯನ್ನು ಪರಿಶೀಲಿಸಬಹುದು.
ರಾಜ್ಯದಲ್ಲಿ ಪಡಿತರ ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕ ಮತ್ತು ಫಲಾನುಭವಿ-ಕೇಂದ್ರಿತವಾಗಿ ಮಾಡುವ ನಿಟ್ಟಿನಲ್ಲಿ ಇಲಾಖೆ ನಿರಂತರ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಫಲಾನುಭವಿಗಳು ನಿಗದಿತ ಸಮಯದಲ್ಲಿ ತಮ್ಮ ಪಾಲಿನ ಆಹಾರಧಾನ್ಯವನ್ನು ಪಡೆದುಕೊಳ್ಳಲು ಮುಂದಾಗಬೇಕು ಮತ್ತು ಯಾವುದೇ ಸಮಸ್ಯೆ ಎದುರಾದರೆ ತಕ್ಷಣ ಅಧಿಕಾರಿಗಳನ್ನು ಸಂಪರ್ಕಿಸಬೇಕು.
ಈ ಆದೇಶದಿಂದ ಜುಲೈ ತಿಂಗಳ ವಿತರಣೆ ಸುಗಮವಾಗಿ ನಡೆಯಲಿದೆ ಎಂದು ಆಶಿಸಲಾಗಿದೆ.
Post Office SCSS Scheme: ಅಂಚೆ ಕಚೇರಿಯ ಈ ಯೋಜನೆಯಿಂದ ಮನೆಯಿಂದಲೇ ತಿಂಗಳಿಗೆ ₹20,000 ಗಳಿಸಿ!